ಬೆಂಗಳೂರು :
ಬಿಪಿಎಲ್ ಅರ್ಜಿ ಹಾಕಿದವರಿಗೂ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್‍ಗಾಗಿ ಅರ್ಜಿ ಸಲ್ಲಿಸಿದವರು ಅರ್ಜಿ ಸಲ್ಲಿಸಿದ ಪ್ರತಿ ತೋರಿಸಬೇಕು. ಒಟಿಪಿ ಪಡೆದು 3 ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲಾಗುವುದು. ಏಪ್ರಿಲ್, ಮೇ ಹಾಗೂ ಜೂನ್ ಈ ಮೂರು ತಿಂಗಳ ಪಡಿತರ ನೀಡಲಾಗುವುದು ಎಂದು ತಿಳಿಸಿದರು.
ಅಲ್ಲದೇ ಎಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿರುವವರಿಗೂ ಒಂದು ಕೆಜಿಗೆ 15 ರೂ.ನಂತೆ 10 ಕೆಜಿ ಅಕ್ಕಿ ನಾಳೆಯಿಂದಲೇ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಜನರು ಸಲ್ಲಿಸಿರುವ ಸ್ವೀಕೃತಿ ಅರ್ಜಿ ರಶೀದಿಯನ್ನು ತೋರಿಸಬೇಕು. ಇದಲ್ಲದೆ ಅವರ ಮೊಬೈಲ್ ನಂಬರ್ಗೆ ಬರುವ ಒಟಿಪಿ ನಂಬರ್ ಆಧಾರದ ಮೇಲೆ ಅಕ್ಕಿ ವಿತರಣೆ ಮಾಡಲಾಗುವುದು. ಈಗಾಗಲೇ ದಾಸ್ತಾನು ಗೋದಾಮುಗಳಿಂದ ಮಳಿಗೆಗಳಿಗೆ ಸಾಗಾಣೆ ಕಾರ್ಯ ಆರಂಭವಾಗಿದೆ ಎಂದರು.
ಈ ಯೋಜನೆಗಾಗಿ 148 ಕೋಟಿ ರೂ. ರಾಜ್ಯದ ಪಾಲು ಹಾಗೂ 148 ಕೋಟಿ ರೂ. ಕೇಂದ್ರದ ಪಾಲನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಸುಮಾರು 8.27 ಲಕ್ಷ ಕುಟುಂಬಗಳು ಪಡಿತರ ಪ್ರಯೋಜನ ಪಡೆಯಲಿದ್ದಾರೆ ಎಂದೂ ಸಹ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ