ರಾಯಣ್ಣ ಮೂರ್ತಿ ಸ್ಥಾಪನೆ ; ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕ್ರಮ!

ಬೆಳಗಾವಿ : 

      ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು‌ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

       ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯಗೊಂಡಿದೆ. ರಾಯಣ್ಣ ಹಾಗೂ ಶಿವಾಜಿ ಯಾವುದೇ ಜಾತಿಗೆ ಸೀಮಿತರಲ್ಲ.‌ ಜಾತಿಗೆ ಸೀಮಿತಗೊಳಿಸುವುದು ತಪ್ಪು.‌ ಇವರಿಬ್ಬರೂ ನಮ್ಮ ಸಮಾಜದ ಆಸ್ತಿ. ಇಂಥ ವೀರ ಪುರುಷರಿಗೆ ಅವಮಾನ ಆಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.

       ಇಂಥ ವಿಷಯಗಳ ಬಗ್ಗೆ ನಾನೊಬ್ಬನೇ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಕನ್ನಡ ಸಂಘಟನೆಯವರ ಮೇಲಿನ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.‌ ಪ್ರಕರಣ ಹಿಂಪಡೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap