ಮಡಿಕೇರಿ :
ಕೊಡಗು ಹಾಗೂ ಮಂಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೇಂದ್ರ ಹವಾಮಾನ ಇಲಾಖೆ ಜುಲೈ 18 ರಿಂದ 23 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿತ್ತು. ಆದರೆ ಆರೆಂಜ್ ಅಲರ್ಟ್ ಗಿಂತ ಹೆಚ್ಚಿನ ಅಂದ್ರೆ 204.5 ಎಂಎಂ ಮಳೆ ಬೀಳುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಇದೀಗ ಕೊಡಗಿನಲ್ಲಿ ಇಂದಿನಿಂದ 22ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಎಚ್ಚರದಿಂದ ಇರಲು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಸೂಚನೆ ನೀಡಿದ್ದಾರೆ. ಈಗಾಗಲೇ ಎನ್ಡಿಆರ್ಎಫ್ ತಂಡ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದು ಅನಾಹುತಗಳು ಸಂಭವಿಸಿದರೆ ತಕ್ಷಣವೇ ಅ ಸ್ಥಳಗಳಿಗೆ ತಲಪುವ ವ್ಯವಸ್ಥೆಗಳು ಹಾಗೂ ಜನರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿದೆ.
ಈಗಾಗಲೇ ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು, ಜುಲೈ 23ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು, ಪ್ರವಾಸಿಗರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.
ಇನ್ನು ಸಾರ್ವಜನಿಕರು ತುರ್ತು ಸೇವೆಗಾಗಿ 08-272-221-077 ಹಾಗೂ 8550-001-077 ಸಂಖ್ಯೆಗೆ ಕರೆ ಮಾಡಲು ಜಿಲ್ಲಾಡಳಿತ ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ