15 ಲಕ್ಷ ಮೌಲ್ಯದ ರಕ್ತಚಂದನ ಪತ್ತೆ!!

ಹೊಸಕೋಟೆ: 

 

     ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 15 ಲಕ್ಷ ರೂ. ಮೌಲ್ಯದ ರಕ್ತಚಂದನವನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

     ರಕ್ತಚಂದನ ಕಳ್ಳಸಾಗಣೆ ಮಾಡುತ್ತಿದ್ದ ಎರಡು ಕಾರುಗಳು ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಗ್ರಾಮದ ಬಳಿ ಅತ್ಯಂತ ವೇಗವಾಗಿ ಸಾಗುತ್ತಿದ್ದ ಸಂದರ್ಭ ಅಪಘಾತಕ್ಕೀಡಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿತ್ತು. 

     ಈ ಸಂದರ್ಭ ಕಾರಿನಲ್ಲಿದ್ದವರನ್ನು ರಕ್ಷಿಸಲು ಗ್ರಾಮಸ್ಥರು ಮುಂದಾದ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ನಂತರ ಕಾರನ್ನು ಎತ್ತಲು ಹೋದ ಗ್ರಾಮಸ್ಥರಿಗೆ ಅದರಲ್ಲಿ ರಕ್ತಚಂದನ ಸಾಗಿಸುತ್ತಿರುವ ವಿಚಾರ ತಿಳಿದಿದೆ.

     ಕೂಡಲೇ ಗ್ರಾಮಸ್ಥರು ಪೋಲಿಸರಿಗೆ ಮಾಹಿತಿ ನೀಡಿದ್ದು. ಖಚಿತ ಮಾಹಿತಿ ಮೇರೆಗೆ ಹೊಸಕೋಟೆ ಪೊಲೀಸರು ಸೋಮವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ 500 ಕೆಜಿ.ಗೂ ಹೆಚ್ಚು ರಕ್ತಚಂದನ ವಶಪಡಿಸಿಕೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಅಸೆಂಟ್ ಕಾರು ಹಾಗು ರಕ್ತ ಚಂದನ ತುಂಡಗಳನ್ನು ವಶಪಡಿಸಿಕೊಂಡಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ