ಬೆಂಗಳೂರು
ಬಹು ಕುತೂಹಲ ಕೆರಳಿಸಿದ್ದ ಆಂಬಿಡೆಂಟ್ ಪ್ರಕರಣ ಹಾಗೂ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಲ್ಲಿ ಸಿಸಿಬಿಯಿಂದ ಬಂಧಿತರಾಗಿದ್ದ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಇಂದು ಜಾಮೀನು ಮಂಜೂರಾಗಿದೆ.
ನವೆಂಬರ್ 10 ರಂದು ವಿಚಾರಣೆಗೆ ಹಾಜರಾಗಿದ್ದ ರೆಡ್ಡಿ ಅವರನ್ನು ಸಿಸಿಬಿಯು ಭಾನುವಾರ ನವೆಂಬರ್ 11 ರಂದು ಬಂಧಿಸಿತ್ತು. ಒಂದನೇ ಎಸಿಎಂಎಂ ನ್ಯಾಯಾಲಯವು ರೆಡ್ಡಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೋರಡಿಸಿತ್ತು.
ನಿನ್ನೆ ಜಾಮೀನಿನ ಅರ್ಜಿ ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ಇಂದು ಜಾಮೀನು ಮಂಜೂರು ಮಾಡಿದೆ. ಹಾಗಾಗಿ ರೆಡ್ಡಿ ಅವರ ಮೂರು ದಿನದ ಜೈಲುವಾಸ ಅನುಭವಿಸಿದ್ದರು. ಮಾಲೂರಿನ ರಘುರಾಮ ರೆಡ್ಡಿ ಎಂಬುವರು ರೆಡ್ಡಿ ಅವರಿಗೆ ಶೂರಿಟಿ ನೀಡಿದ್ದಾರೆ ಎಂದು ಮೂಲಗಳಿಂದ ಧೃಡ ಪಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ