ಕಾಂಗ್ರೆಸ್ ನಂತರ JDS ಸಚಿವರ ಸಾಮೂಹಿಕ ರಾಜೀನಾಮೆ!!!

ಬೆಂಗಳೂರು :

      ಕಾಂಗ್ರೆಸ್ ನ 21 ಸಚಿವರು ರಾಜೀನಾಮೆ ಕೊಟ್ಟ ಬೆನ್ನಲ್ಲಿಯೇ, ಜೆಡಿಎಸ್ ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

      ಈ ಕುರಿತು ಸಿಎಂ ಆಪ್ ಕರ್ನಾಟಕ ಟ್ವಿಟರ್ ಪೇಜ್ ನಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಶೀಘ್ರದಲ್ಲಿಯೇ ಸಂಪುಟ ಪುನರಚಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

       ಒಟ್ಟಾರೆಯಾಗಿ, ತಮಿಳುನಾಡಿನ ಸಿಎಂ ಆಗಿದ್ದ ಕಾಮರಾಜ್ ಹಿಂದೊಮ್ಮೆ ಅನುಸರಿಸಿದ ತಂತ್ರಗಾರಿಕೆಯನ್ನೇ ದೋಸ್ತಿ ಉಳಿಸಿಕೊಳ್ಳಲು ಜೆಡಿಎಸ್ ಕಾಂಗ್ರೆಸ್ ನಾಯಕರು ಅನುಸರಿಸಿದ್ದಾರೆ. ಈ ಮೂಲಕ ಬಂಡಾಯ ಶಾಸಕರಿಗೆ ಸಚಿವ ಸ್ಥಾನದ ಆಫರ್ ಅನ್ನು ಮುಂದಿಟ್ಟಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap