ಚಿಕ್ಕಬಳ್ಳಾಪುರ :
ವಿಶ್ವವಿಖ್ಯಾತ ಪ್ರಸಿದ್ಧ ಪ್ರವಾಸಿತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಬೆಟ್ಟಕ್ಕೆ ಪ್ರವೇಶದ್ವಾರದ ಟಿಕೆಟ್ ಕೌಂಟರ್ ಬಳಿಯಿಂದ ನಂದಿ ಬೆಟ್ಟದ ಮೇಲ್ಭಾಗಕ್ಕೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ತೋಟಗಾರಿಕಾ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ವಾರದ 5 ದಿನಗಳ ಕಾಲ ನಂದಿ ಬೆಟ್ಟದ ತುದಿಗೆ ವಾಹನ ಪ್ರವೇಶವನ್ನು ನಿಷೇಧಿಸಲಾಗಿದೆ. ವಾರದ 5 ದಿನಗಳಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಸಂಪೂರ್ಣವಾಗಿ ವಾಹನಗಳ ಪ್ರವೇಶವನ್ನು ನಿರ್ಬಂಧ ಮಾಡಿದ್ದು, ಶನಿವಾರ ಹಾಗೂ ಭಾನುವಾರ ಮಾತ್ರ ವಾಹನಗಳ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎನ್ನಲಾಗಿದೆ.
ನಂದಿ ಬೆಟ್ಟದ ಪ್ರವೇಶ ದ್ವಾರದ ಬಳಿ ಇರುವ ಟಿಕೆಟ್ ಕೌಂಟರ್ ಬಳಿಯಿಂದ ಬೆಟ್ಟದ ತುದಿಗೆ ಸೋಮವಾರದಿಂದ ಶುಕ್ರವಾರದವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದ್ದು, ಟಿಕೆಟ್ ಕೌಂಟರ್ ಬಳಿ ವಾಹನಗಳ ಪಾರ್ಕಿಂಗ್ ಗೆ ಅವಕಾಶವನ್ನು ನೀಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟದ ನಿರ್ವಹಣೆಯನ್ನು ತೋಟಗಾರಿಕಾ ಇಲಾಖೆ ಹೊತ್ತುಕೊಂಡಿದೆ. ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರು ವಾಹನಗಳಲ್ಲಿ ಬರುವುದರಿಂದ ಸಂಚಾರ ದಟ್ಟಣೆ ಮತ್ತು ಮಾಲಿನ್ಯ ಹೆಚ್ಚುತ್ತಿದೆ. ಆದ್ದರಿಂದ ವಾಹನ ಸಂಚಾರ ನಿಷೇಧ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ