ಕೋಲ್ಕತಾ :
ಆತ್ಮಹತ್ಯೆಗೆ ಮುನ್ನ ‘ನನ್ನ ಸಾವಿಗೆ ಮಮತಾ ಬ್ಯಾನರ್ಜಿ ಅವರೇ ಕಾರಣ’ ಎಂದು ಪತ್ರ ಬರೆದು ಪಶ್ಚಿಮ ಬಂಗಾಳದ ಐಪಿಎಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವುದು ಈಗ ಮಮತಾ ಬ್ಯಾನರ್ಜಿಗೆ ಸಂಕಷ್ಟ ತಂದೊಡ್ಡಿದೆ.
ಕೋಲ್ಕತಾದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯೋರ್ವರು ಸರ್ಕಾರದ ಬಗ್ಗೆ ತಮ್ಮ ಆತ್ಮಹತ್ಯಾ ಪತ್ರದಲ್ಲಿ ಉಲ್ಲೇಖಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂಧಿಸಿ ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ಮುಖಂಡ ಮುಕುಲ್ ರಾಯ್ ವಾಗ್ದಾಳಿ ನಡೆಸಿದ್ದಾರೆ.
1986ರ ಬ್ಯಾಚ್ನ ಐಪಿಎಸ್ ಅಧಿಕಾರಿ ಗೌರವ್ ದತ್ನನ್ನು ಮಮತಾ ಬ್ಯಾನರ್ಜಿ ಸರ್ಕಾರ ಅಮಾನತುಗೊಳಿಸಿ ಆದೇಶ ನೀಡಿತ್ತು. ಇದರಿಂದಾಗಿ ಫೆ. 19 ರಂದು ತಮ್ಮ ಕೈ ಕತ್ತರಿಸಿಕೊಂಡು ಸ್ವಿಮ್ಮಿಂಗ್ ಫೂಲ್ ನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು.
ಇದೀಗ ಅವರ ಆತ್ಮಹತ್ಯಾ ಪತ್ರ ಲಭ್ಯವಾಗಿದ್ದು, ನನ್ನ ಸಾವಿಗೆ ಮಮತಾ ಬ್ಯಾನರ್ಜಿ ಅವರೇ ಕಾರಣ. ವರ್ಗಾವಣೆ ಸಂದರ್ಭದಲ್ಲಿ ಕಾರ್ಯ ನಿರ್ವಹಣೆ ವೇಳೆ ತಮಗೆ ಯಾವ ರೀತಿಯಾಗಿ ಹಿಂಸೆ ನೀಡಿದ್ದರು, ಎನ್ನುವ ವಿಚಾರ ತಿಳಿಸಿದ್ದಾರೆ. ಅವರು ನಿವೃತ್ತಿಯಾದರೂ ಸಹ ಅವರ ನಿವೃತ್ತಿ ಅವಧಿಯನ್ನು ತಡೆಹಿಡಿಯಲಾಗಿತ್ತು ಎನ್ನುವುದನ್ನೂ ಅವರು ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಐಪಿಎಸ್ ಅಧಿಕಾರಿಯ ಆತ್ಮಹತ್ಯಾ ಪತ್ರ ಫುಲ್ ವೈರಲ್ ಆಗಿದ್ದು, ಲೋಕಸಭಾ ಚುನಾವಣೆಗೆ ಸಿದ್ಧತೆಯಲ್ಲಿರುವ ಮಮತಾ ಬ್ಯಾನರ್ಜಿಗೆ ಐಪಿಎಸ್ ಅಧಿಕಾರಿ ಸಾವು ಉರುಳಾಗುವ ಸಾಧ್ಯತೆ ಕಂಡುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ