ತುಮಕೂರು :
ಬೈಕ್ ನಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಮೂವರು ಯುವಕರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತುಮಕೂರಿನ ನೆಲಹಾಳ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡಬೀರನಹಳ್ಳಿ ಗ್ರಾಮದ ಪೃಥ್ವಿರಾಜ್ (25) ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದ ಹನುಮಂತರಾಯ (24) ಮತ್ತು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಚೆಲ್ಲೂರು ಗ್ರಾಮದ ಶಿವಕುಮಾರ್ (24) ಎಂದು ಗುರುತಿಸಲಾಗಿದೆ.
ಒಂದೇ ಪಲ್ಸರ್ ಬೈಕ್‍ನಲ್ಲಿ ಬೆಳಗ್ಗೆ ಚಳ್ಳಕೆರೆಯಿಂದ ಈ ಮೂವರು ಚಿತ್ರದುರ್ಗಕ್ಕೆ ಸ್ನೇಹಿತನ ಮದುವೆಗೆ ಬಂದಿದ್ದ ಇವರು ಇಂದು ಬೆಳಗ್ಗೆ ಬೆಂಗಳೂರು ಕಡೆಗೆ ಹೋಗುತ್ತಿದ್ದರು. ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಸರ್ ಬೈಕ್ ನಲ್ಲಿ ವೇಗವಾಗಿ ಚಲಿಸುತ್ತಿದ್ದ ಮೂವರು ಯುವಕರು ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೋರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ