ಕಡಬ:
KSRTC ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಎಂಬಲ್ಲಿ ನಡೆದಿದೆ.
ಮೃತಪಟ್ಟವನನ್ನು ಸುಬ್ರಹ್ಮಣ್ಯ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಮೋಕ್ಷಿತ್(21) ಎಂದು ಗುರುತಿಸಲಾಗಿದೆ. ಮೋಕ್ಷಿತ್ ತನ್ನ ಪಲ್ಸರ್ ಬೈಕಿನಲ್ಲಿ ಬಲ್ಯದಿಂದ ಕಡಬಕ್ಕೆ ತೆರಳುತ್ತಿದ್ದಾಗ KSRTC ಬಸ್ ನಡುವೆ ಡಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ.
ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ