ಖಾಸಗಿ ಬಸ್-ಕಾರು ಮುಖಾಮುಖಿ : ಒಂದೇ ಕುಟುಂಬದ 3 ಸಾವು!!

ಮೈಸೂರು:

     ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿ.ನರಸೀಪುರ ತಾಲೂಕಿನ ದುದ್ದಗೆರೆ ಬಳಿ ನಡೆದಿದೆ.

       ಮೃತರೆಲ್ಲರೂ ಬೆಂಗಳೂರು ನಿವಾಸಿಗಳಾಗಿದ್ದು, ಗೃಹಪ್ರವೇಶಕ್ಕೆಂದು ದುದ್ದಗೆರೆ ಗ್ರಾಮಕ್ಕೆ ಕುಟುಂಬ ಸಮೇತವಾಗಿ ಹೋಗಿದ್ದರು. ಸಮಾರಂಭ ಮುಗಿಸಿ ವಾಪಾಸ್ಸಾಗುತ್ತಿದ್ದಾಗ ಕಾರು ಮತ್ತು ಖಾಸಗಿ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

      ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ನರಳಾಡುತ್ತಿದ್ದ ಇಬ್ಬರನ್ನು ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ದಾಖಲಿಸಲಾಗಿದೆ.

      ವರುಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap