ಹಾಸನ:
ದುಷ್ಕಮಿ೯ಗಳು ರೌಡಿಶೀಟರ್ ನನ್ನು ಚಾಕುವಿನಿಂದ ತಿವಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಹಡೆನಹಳ್ಳಿ ಹರೀಶ ಕೊಲೆಯಾದ ವ್ಯಕ್ತಿ. ಈತ ಧನಲಕ್ಷ್ಮಿ ಥಿಯೇಟರ್ ಹತ್ತಿರದ ಬಾರ್ ನಲ್ಲಿ ಕುಡಿದು ಹೊರ ಬಂದಾಗ ಈತನನ್ನು ಚಾಕುವಿನಿಂದ ತಿವಿದು ಹತ್ಯೆ ಮಾಡಿದ್ದಾರೆ.
ಕಳೆದ 2 ವರ್ಷಗಳ ಹಿಂದೆ ಶಿವ ಎಂಬುವನನ್ನು ಕೊಲೆ ಮಾಡಿ ಆರೋಪಿ ಹರೀಶ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಡಾ:ಎ.ಎನ್.ಪ್ರಕಾಶ ಗೌಡ ತಿಳಿಸಿದ್ದಾರೆ.
ಸುದ್ದಿ ತಿಳಿದ ಚನ್ನರಾಯಪಟ್ಟಣ ನಗರ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದು ಮೃತದೇಹವನ್ನು ಶವ ಪರೀಕ್ಷೆಗೆ ಸಕಾ೯ರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ