ಮಂಡ್ಯ :
ಸಿಎಂ ಕುಮಾರಸ್ವಾಮಿ ಬೆಂಗಾವಲು ಪಡೆಯ ವಾಹನದಲ್ಲಿ ರೌಡಿ ಶೀಟರ್ ಕಾಣಿಸಿಕೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಹೌದು, ಮಳವಳ್ಳಿ ತಾಲೂಕಿನ ಕಿರುಗಾವಲು ವ್ಯಾಪ್ತಿಯಲ್ಲಿ ಸಿಎಂ ರೋಡ್ ಶೋ ವೇಳೆ ರೌಡಿ ಶೀಟರ್ ಪ್ರಕಾಶ್ ಸಿಎಂ ಬೆಂಗಾವಲು ಪಡೆ ವಾಹನದಲ್ಲಿ ಕುಳಿತುಕೊಂಡಿದ್ದಾನೆ ಎನ್ನಲಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ರೌಡಿ ಶೀಟರ್ ಗಳ ಫರೆಡ್, ಗಡಿಪಾರು ಮಾಡುತ್ತಿರುವ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಾವಲು ಪಡೆ ವಾಹನದಲ್ಲಿ ರೌಡಿ ಶೀಟರ್ ನನ್ನು ಪೊಲೀಸ್ ಇಲಾಖೆ ಕೂರಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಸ್ಥಳೀಯ ಜನತೆ ಪ್ರಶ್ನೆ ಮಾಡುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
