ತುಮಕೂರು:
ರೌಡಿ ಶೀಟರ್ ಒಬ್ಬನನ್ನು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ತುಮಕೂರಿನ ಬೆಳಗುಂಬದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೋಹನ್ ಕುಮಾರ್ ಅಲಿಯಾಸ್ ಚೊಟ್ಟ ಕುಮಾರ್(35) ಮೃತ ರೌಡಿಶೀಟರ್. ಮೋಹನ್ ಕುಮಾರ್ ಹಾಗೂ ಆತನ ಸ್ನೇಹಿತ ಟೆಂಪರ್ ರಾಜಾ ಹನುಮಂತರಪುರದ ಬಾರೊಂದರಲ್ಲಿ ಕಂಠಪೂರ್ತಿ ಕುಡಿದಿದ್ದಾರೆ. ನಂತರ ಇಬ್ಬರೂ ಬೈಕ್ ನಲ್ಲಿ ಬೆಳಗುಂಬ ಬಸ್ ಸ್ಟಾಪ್ ಗೆ ತೆರಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಚಟ್ಟ ಕುಮಾರ್ ಮೊದಲು ಟೆಂಪರ್ ರಾಜಾನ ಕೆನ್ನೆಗೆ ಏಟು ಕೊಟ್ಟಿದ್ದಾನೆ. ಇದರಿಂದ ಸಿಟ್ಟಿಗೆದ್ದ ರಾಜ ಅಲ್ಲಿಯೇ ಪಕ್ಕದಲ್ಲಿದ್ದ ಕಲ್ಲು ಎತ್ತಿಹಾಕಿದ್ದಾನೆ ಎಂದು ತಿಳಿದುಬಂದಿದೆ.
ಇನ್ನು ತೀವ್ರ ಗಾಯಗೊಂಡಿದ್ದ ಈತನನ್ನು ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಮೃತನು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾನೆ. ಈ ಘಟನೆಯಿಂದ ಸ್ಥಳಿಯರು ಆತಂಕಗೊಂಡಿದ್ದಾರೆ.
ಮೃತ ಮೋಹನ್ ಕುಮಾರ್ 3 ಕೊಲೆ ಪ್ರಕರಣ, ಕಳ್ಳತನ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.
ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ್ದಿದ್ದಾರೆ. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ