ಪೊಲೀಸ್ ಪೇದೆಗೆ ಚಾಕು ಇರಿದ ರೌಡಿ : ಶೂಟೌಟ್ ಮಾಡಿ ಬಂಧನ!

 ಮಂಗಳೂರು:

      ಕುಖ್ಯಾತ ರೌಡಿ ಗೌರೀಶ್ ಎಂಬಾತನನ್ನು ಬಂಧಿಸಲು ಹೋದ ಪೋಲಿಸ್ ಅಧಿಕಾರಿಗಳ ಮೇಲೆ ರೌಡಿಯು ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರೌಡಿಯ ಕಾಲಿಗೆ ಶೂಟೌಟ್ ನಡೆಸಿ ಬಂಧಿಸಿದ ಘಟನೆ ಗುರುವಾರ ರಾತ್ರಿ ನಗರದಲ್ಲಿ ನಡೆದಿದೆ.

      ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ನಗರ ಪೋಲಿಸ್ ಆಯುಕ್ತ ಸಂದೀಪ್ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿ ರೌಡಿಶೀಟರ್ ಗೌರೀಶ್ ವಿರುದ್ಧ ಮಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರೌಡಿಶೀಟರ್ ನ್ನು ಬಂಧಿಸಲು ಬಲೆಬೀಸಿದ್ದರು.

      ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದಲ್ಲಿನ ಪೇದೆ ಶೀನಪ್ಪ ಎಂಬವರಿಗೆ ಆರೋಪಿ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಜಾಗೃತರಾದ ಎಸ್ ಐ ಕಬ್ಬಾಳ್ ರಾಜ್ ಅವರು ತಮ್ಮ ಪ್ರಾಣರಕ್ಷಣೆಗಾಗಿ ರೌಡಿಶೀಟರ್ ನ ಕಾಲಿಗೆ ಫೈರಿಂಗ್ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

      ರೌಡಿಶೀಟರ್ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮೂರು ಕೊಲೆ ಆರೋಪ ಪ್ರಕರಣಗಳಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link