ಬೆಂಗಳೂರು :
ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಕೃಷ್ಣಮೂರ್ತಿ ಅವರು ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದು, “ಜ್ಞಾನ ಭಾರತಿ ಕೃಷ್ಣಮೂರ್ತಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟಿದ್ದೇವೆ. ಎಲ್ಲರೂ ಅವರನ್ನು ಬೆಂಬಲಿಸಬೇಕು” ಎಂದು ಹೇಳಿದರು.
“ಜ್ಞಾನ ಭಾರತಿ ಕೃಷ್ಣಮೂರ್ತಿ ತಂದೆ ನಮ್ಮ ಪಕ್ಷಕ್ಕಾಗಿ ದುಡಿದವರು. ಸ್ವಂತ ದುಡಿಮೆಯಿಂದ ಕೃಷ್ಣಮೂರ್ತಿ ಬೆಳೆದು ಬಂದಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ಕೊಡುತ್ತಿದ್ದೇವೆ” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಉಪ ಚುನಾವಣೆಗಾಗಿ ಜ್ಞಾನ ಭಾರತಿ ಕೃಷ್ಣಮೂರ್ತಿ ಅಕ್ಟೋಬರ್ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ