ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಕೊರೊನಾ ಸೋಂಕಿತ ಪತ್ತೆ!!

ಮಂಗಳೂರು: 

      ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಇಂದು ಪತ್ತೆ ಮಾಡಲಾಗಿದೆ.

      ಪುತ್ತೂರಿನ ದರ್ಬೆ ನಿವಾಸಿ ದೇವರಾಜು(18) ಯುವಕ ಕೋವಿಡ್ ರೋಗ ಲಕ್ಷಣಗಳಿವೆ ಎಂದು ಹೇಳಿಕೊಂಡು ಜುಲೈ 1ರಂದು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಬಂದಿದ್ದ. ಈತನನ್ನು ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

      ಭಾನುವಾರ(ಜು.5) ಈತನಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಆದರೆ ಸಂಜೆ ನಾಲ್ಕು ಗಂಟೆಯ ಸಮಯಕ್ಕೆ ಆಸ್ಪತ್ರೆಯ ವಾರ್ಡ್ ನಿಂದ ತಪ್ಪಿಸಿಕೊಂಡಿದ್ದ. ಈ ಬಗ್ಗೆ ಆರೋಗ್ಯ ಇಲಾಖೆಯು ಅಧಿಕೃತ ಮಾಹಿತಿ ನೀಡಿದ್ದು, ಆತನ ಬಗ್ಗೆ ತಿಳಿದು ಬಂದಲ್ಲಿ ತಕ್ಷಣವೇ ಇಲಾಖೆಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡುವಂತೆ ಕೇಳಿಕೊಂಡಿದ್ದರು.

      ಇಂದು ಈತನನ್ನು ಪತ್ತೆ ಮಾಡಲಾಗಿದ್ದು, ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

     ನಮ್ಮ ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಾಣಿ ಮತ್ತು ಶಂಕರಪ್ಪ ನಂಡ್ಯಾಲ್ ಅವರು ತಪ್ಪಿಸಿಕೊಂಡಿದ್ದ ಆರೋಪಿಯನ್ನು ಹಿಡಿದು ವೀರತನ ಮೆರೆದಿದ್ದಾರೆ. ಆದರೆ ಆರೋಪಿಯೂ ಈ ಸಮಯದಲ್ಲಿ ತನಗೆ ತಿಳಿಯದಂತೆ ಅನೇಕರಿಗೆ ಸೋಂಕು ಹರಡಿರಬಹುದು ಎಂದು ಆಯುಕ್ತರು ಟ್ವೀಟ್ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ