ಮಾಜಿ ಸಂಸದ , ಹಿರಿಯ ಕಾಂಗ್ರೆಸ್ ನಾಯಕ ಎಸ್.ಬಿ.ಸಿದ್ನಾಳ ನಿಧನ

 ಬೆಳಗಾವಿ : 

      ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ ಇಂದು ಬೆಳಗಿನಜಾವ ಬೆಳಗಾವಿಯ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.

      ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರ ಅಂತ್ಯಕ್ರಿಯೆ ಸಾಣಿಕೊಪ್ಪದಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ ಎನ್ನಲಾಗಿದೆ.

      ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4 ಬಾರಿ ಆಯ್ಕೆಯಾಗಿದ್ದ ಎಸ್. ಬಿ. ಸಿದ್ನಾಳ್ ಅವರು ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ಸಾಣಿಕೊಪ್ಪದವರು. ಉದ್ಯಮಿಗಳಾದ ಶಶಿಕಾಂತ ಸಿದ್ನಾಳ ಹಾಗೂ ಶಿವಕಾಂತ ಸಿದ್ನಾಳ ಎಸ್.ಬಿ.ಸಿದ್ನಾಳ್ ಅವರ ಪುತ್ರರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap