ಮೈಸೂರು:
ಗಾನಕೋಗಿಲೆ ಎಸ್.ಜಾನಕಿ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
80 ವರ್ಷದ ಜಾನಕಿ ಅವರು ಮೈಸೂರಿನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿ ಬಿದ್ದು ಸೊಂಟ ಮುರಿದುಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೊಂಟದ ಭಾಗದಲ್ಲಿ ಫ್ರಾಕ್ಚರ್ ಕಂಡುಬಂದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಮೂರು ದಿನಗಳ ಹಿಂದೆಯೇ ಜಾನಕಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ