ಹಾಸನ:
ಅನಾರೋಗ್ಯದ ಹಿನ್ನಲೆಯಲ್ಲಿ ಪರಿಸರ ಪ್ರೇಮಿ, ಶತಾಯುಷಿ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ತೀವ್ರ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿ ಅಸ್ವಸ್ಥರಾಗಿ ಬಳಲುತ್ತಿದ್ದ ಅವರನ್ನು ಹಾಸನ ನಗರದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಲುಮರದ ತಿಮ್ಮ ಅವರು ತಮ್ಮ ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರಿನ ಬಳ್ಳೂರು ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ವಾಸವಾಗಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ