ರಾಮನಗರ:
ಮಾಜಿ ಮತ್ತು ಹಾಲಿ ಮುಖ್ಯಮಂತ್ರಿಗಳು ಸಮಯ ಸಾಧಕರು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವಾಗ್ದಾಳಿ ನಡೆಸಿದರು.
ರಾಮನಗರದಲ್ಲಿ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಪರ ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಿದ್ದ ಅವರು, ಈರ್ವರು ದೊಡ್ಡ ನಾಟಕಕಾರರು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿದರು.
ಮುಖ್ಯಮಂತ್ರಿ ಸ್ವಕ್ಷೇತ್ರವಾದ ರಾಮನಗರವು ರಾಜ್ಯದಲ್ಲಿಯೇ ಹಿಂದುಳಿದ ಕ್ಷೇತ್ರವಾಗಿದ್ದು, ಕುಡಿಯಲು ನೀರಿಲ್ಲದೇ ಜನ ಪರದಾಡುತ್ತಿದ್ದಾರೆ ಎಂದು ದೂರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
