ಶಾಸಕ ಹರತಾಳು ಹಾಲಪ್ಪಗೆ ಕೋವಿಡ್‌-19 ಪಾಸಿಟಿವ್‌!!

ಬೆಂಗಳೂರು: 

     ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರದ ಶಾಸಕ ಎಚ್‌.ಹಾಲಪ್ಪ ಅವರಿಗೆ ಕೋವಿಡ್‌ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ.

      ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಹಾಲಪ್ಪ ಮಾಹಿತಿ ಹಂಚಿಕೊಂಡಿದ್ದಾರೆ.

     ಶಾಸಕ ಹಾಲಪ್ಪ ಅವರ ಪತ್ನಿ, ಕಾರು ಚಾಲಕ ಹಾಗೂ ಓರ್ವ ಸಿಬ್ಬಂದಿಗೆ ಕೂಡಾ ಕೋವಿಡ್ ಪಾಸಿಟಿವ್ ಕಂಡುಬಂದಿದೆ.

    ಸದ್ಯ ಶಾಸಕ‌ ಹಾಲಪ್ಪ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ

      ತಮಗೆ ಸೋಂಕು ತಾಗಿರುವ ಕಾರಣದಿಂದ ತಮ್ಮ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಹಾಲಪ್ಪ ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ