ಬೆಂಗಳೂರು :
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ನಾಗೇಶ್ ಬಾಬು ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಗೇಶ್ ಬಾಬು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ನಾಗೇಶ್ ಬಾಬು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
1957ರಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಾಗೇಶ್ ಬಾಬು 1970ರಲ್ಲಿ ‘ಅನಿರೀಕ್ಷಿತ’ ಎಂಬ ಚಿತ್ರದ ಮೂಲಕ ಪೂರ್ಣಪ್ರಮಾಣದಲ್ಲಿ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ