ಚಾಮರಾಜನಗರ :

ಕೊರೊನಾ ವೈರಸ್ ಭೀತಿ ಹಿನ್ನೆಲೆ ಎಸ್ ಎಸ್‌ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ವಿಶೇಷ ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಕೂಡ ಸ್ಯಾನಿಟೈಸರ್, ಸೋಪ್ ಹಾಗೂ ಕೈ ತೊಳೆಯಲು ನೀರಿನ ವ್ಯವಸ್ಥೆ ಮಾಡಲಾಗಿದೆ. ಒಂದು ರೂಂನಲ್ಲಿ ಕಡಿಮೆ ಮಕ್ಕಳನ್ನು ಕೂರಿಸಿ ಪರೀಕ್ಷೆ ಬರೆಸಲಾಗುತ್ತದೆ. ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ಅಂತರ ಕಾಯ್ದುಕೊಳ್ಳಲಾಗುತ್ತದೆ ಎಂದರು.

ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸ್ಯಾನಿಟೈಸರ್, ಸೋಪ್ ಹಾಗೂ ಕೈ ತೊಳೆಯಲು ನೀರಿನ ವ್ಯವಸ್ಥೆ ಮಾಡಲಾಗಿದೆ. ಯಾರಿಗಾದರೂ ಸಮಸ್ಯೆ ಇದ್ದರೆ ಮಾಸ್ಕ್ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದಾರೆ. ತುಂಬಾ ತೊಂದರೆಯಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಾಕಶ ಕೊಟ್ಟಿದ್ದೇವೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








