ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಪ್ತಪದಿ ವಿವಾಹ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.
ಕೊರೊನಾ 2 ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಲಾಗಿದ್ದು, ಹೀಗಾಗಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸರ್ಕಾರದಿಂದಲೇ ನಡೆಯಬೇಕಿದ್ದ ಸಾಮೂಹಿಕ ವಿವಾಹ ನಡೆಸುವ ಸಪ್ತಪದಿ ಕಾರ್ಯಕ್ರಮ ಮುಂದೂಡಲಾಗಿದೆ.
ಮೈಸೂರು, ನಂಜನಗೂಡು, ಕೊಲ್ಲೂರು, ಬಳ್ಳಾರಿ ಸೇರಿದಂತೆ ರಾಜ್ಯಾದ್ಯಂತ ಸಪ್ತಪದಿ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿವಾಹಕ್ಕೆ ಈಗಾಗಲೇ ಹಲವು ಜೋಡಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಪ್ತಪದಿ ವಿವಾಹ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
