ಶಾಲಾ ಪ್ರವಾಸಕ್ಕೆ ಹೊರಟಿದ್ದ ಬಸ್ ಮರಕ್ಕೆ ಡಿಕ್ಕಿ!!!

ಕಲಬುರಗಿ:

      ಶಾಲಾ ಮಕ್ಕಳು ಪ್ರವಾಸಕ್ಕೆಂದು ಹೊರಟಿದ್ದ ಖಾಸಗಿ ಬಸ್ ಮರಕ್ಕೆ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಕಲಬುರಗಿ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

      ನಗರದ ವೆಂಕಟಗಿರಿ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಚನ್ನವೀರ ನಗರದಲ್ಲಿರುವ ಅಯ್ಯಪ್ಪ ಶಾಲೆಗೆ ಸೇರಿದ ಬಸ್ ಇದಾಗಿದೆ. ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಹೊರಟಿದ್ದರು.  ಈ ವೇಳೆ ಜೇವರ್ಗಿ ರಸ್ತೆಯಲ್ಲಿರೋ ವೆಂಕಟಗಿರಿ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್​​ನ ಮುಂದಿನ ಗಾಜು ಪುಡಿ ಪುಡಿಯಾಗಿದೆ. 

      ಬಸ್ ನಲ್ಲಿದ್ದ ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆಯಿಂದ ಅಘಾತಗೊಂಡ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ.

      ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link