ಬೆಂಗಳೂರು :
ಇನ್ಮುಂದೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಚಾಲಕರಿಗೂ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲು ಸಾರಿಗೆ ಇಲಾಖೆ ಮುಂದಾಗಿದೆ.
ದೇಶಾದ್ಯಂತ ನೂತನ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದಿದ್ದು, ಬಿಎಂಟಿಸಿ, ಕೆಎಸ್ ಆರ್ ಟಿಸಿ ಸೇರಿ ಸಾರಿಗೆ ನಿಗಮಗಳ ಚಾಲಕರು ಇನ್ಮುಂದೆ ಸೀಟ್ ಬೆಲ್ಟ್ ಹಾಕದೇ ಬಸ್ಸನ್ನು ಚಲಾಯಿಸುವಂತಿಲ್ಲ. ಹಾಗೇನಾದರೂ ಮಾಡಿದರೆ 1 ಸಾವಿರ ರೂ. ದಂಡ ಕಟ್ಟಬೇಕಾಗುತ್ತದೆ. ಇಂಥದೊಂದು ನಿಯಮವನ್ನು ಅನುಷ್ಠಾನಗೊಳಿಸಲು ಸಾರಿಗೆ ಇಲಾಖೆ ಮುಂದಾಗಿದೆ.
ಪ್ರಯಾಣಿಕರ ಸುರಕ್ಷೆಗೆ ಆದ್ಯತೆ ನೀಡುವ ಉದ್ದೇಶದಲ್ಲಿ ಮೋಟಾರು ವಾಹನ ಕಾಯ್ದೆಯಲ್ಲಿ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ಸಾರಿಗೆ ಇಲಾಖೆ ಕಡ್ಡಾಯಗೊಳಿಸಿರುವ ತೀರ್ಮಾನವನ್ನು ಬಸ್ ಚಾಲಕರು ಸ್ವಾಗತಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ