ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರಕ್ಕೆ ಸರ್ಕಾರದ ಕೊಕ್ಕೆ!!

ಬೆಂಗಳೂರು: 

      ಸರ್ಕಾರಿ ಶಾಲಾ ಮಕ್ಕಳಿಗೆ ವರ್ಷಕ್ಕೆ ಎರಡು ಬಾರಿ ಸಮವಸ್ತ್ರ ನೀಡಲಾಗುತ್ತಿತ್ತು. ಆದರೆ ಇದನ್ನು ಒಂದು ಬಾರಿ ಮಾತ್ರ ನೀಡಲಾಗುವುದು ಎಂದು ಹೊಸ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.

      ಖಾಸಗಿ ಶಾಲೆ ಒಕ್ಕೂಟದೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಸಭೆಯಲ್ಲಿ ಮಾತನಾಡಿದ ಸಚಿವರು, ಪ್ರಸಕ್ತ ವರ್ಷ ಎರಡನೇ ಜೊತೆ ಸಮವಸ್ತ್ರವನ್ನು ಸರ್ಕಾರಿ ಶಾಲೆ ಮಕ್ಕಳಿಗೆ ನೀಡುವುದಿಲ್ಲ, ಸಮವಸ್ತ್ರದ ಟೆಂಡರ್ ಮತ್ತು ತೀರ್ಮಾನಗಳು ತಾವು ಸಚಿವರಾಗಿದ್ದ ವೇಳೆ ತೆಗೆದುಕೊಂಡ ನಿರ್ಧಾರಗಳಲ್ಲ. ಮುಂದಿನ ವರ್ಷ ಎರಡನೇ ಜೊತೆ ಸಮವಸ್ತ್ರ ನೀಡುವ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

       ಇದರಿಂದಾಗಿ ಕಳೆದ ಮೂರು ವರ್ಷಗಳಿಂದ ವರ್ಷಕ್ಕೆ ಎರಡು ಜೊತೆ ಸಮವಸ್ತ್ರವನ್ನು ಪಡೆಯುತ್ತಿದ್ದ ಸರ್ಕಾರಿ ಶಾಲೆ ಮಕ್ಕಳು ಈ ಬಾರಿ ಒಂದೇ ಜೊತೆ ಸಮವಸ್ತ್ರ ಪಡೆಯಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link