ವಿಜಯಪುರ :
ಪಿಯು ಪರೀಕ್ಷೆ ಪ್ರಶ್ನೆಪತ್ರಿಕೆ ಬಹಿರಂಗ ಆಗದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಎಷ್ಟೇ ಕಟ್ಟೆಚ್ಚರ ವಹಿಸಿದ್ದರೂ, ಪರೀಕ್ಷೆ ಆರಂಭವಾದ ಒಂದೇ ಗಂಟೆಯಲ್ಲಿ ಭೌತಶಾಸ್ತ್ರ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎನ್ನಲಾಗುತ್ತಿದೆ.
ಹೌದು, ವಿಜಯಪುರದ ಶಾಂತೇಶ್ವರ ಪಿಯು ಕಾಲೇಜಿನಲ್ಲಿ ಪ್ರಶ್ನೆಪತ್ರಿಕೆ ಲೀಕ್ ಆಗಿದೆ. ಭೌತಶಾಸ್ತ್ರ ಪರೀಕ್ಷೆ ಆರಂಭವಾಗುತ್ತಿದ್ದಂತೆ, ಪ್ರಶ್ನೆ ಪತ್ರಿಕೆಯನ್ನು ಪೋಟೋ ಕ್ಲಿಕ್ಕಿಸಿಕೊಂಡಿರುವ ಕಿಡಿಗೇಡಿಗಳು, ಸೋಷಿಯಲ್ ಮೀಡಿಯಾದ ಮೂಲಕ ಲೀಕ್ ಮಾಡಿರುವುದಾಗಿ ತಿಳಿದು ಬಂದಿದೆ.
ಸೋಷಿಯಲ್ ಮೀಡಿಯಾಗಳ ಮೂಲಕ ದ್ವಿತೀಯ ಪಿಯುಸಿ ಭೌತಶಾಸ್ತ್ರ ವಿಷಯದ ಪ್ರಶ್ನೆಪತ್ರಿಕೆ ವೈರಲ್ ಆಗಿದ್ದು, ಇದನ್ನು ಕಾಲೇಜಿನ ಶಾಲಾ ಸಿಬ್ಬಂದಿಗಳೇ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಬೇಕಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ