ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; 6,66,497 ವಿದ್ಯಾರ್ಥಿಗಳು ಪಾಸ್!!

ಬೆಂಗಳೂರು :

     ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಜಾಲತಾಣದಲ್ಲಿ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

      ಪ್ರತಿ ವರ್ಷ ಪರೀಕ್ಷೆಗೆ ಕೊಟ್ಟ ನೋಂದಣಿ ಸಂಖ್ಯೆ ಮೇಲೆ ಫಲಿತಾಂಶ ಸಿಗುತ್ತಿತ್ತು. ಈ ಬಾರಿ ಪರೀಕ್ಷೆಯಾಗದೆ ರಿಜಿಸ್ಟರ್ ನಂಬರ್ ಸಿಕ್ಕಿಲ್ಲ. ಹೀಗಾಗಿ, ಫಲಿತಾಂಶ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್ ನಂಬರ್ ಜನರೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ. Know my number ಆಯ್ಕೆಯನ್ನು ಪಿಯು ವೆಬ್​ಸೈಟ್ http://karresults.nic.in/​ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು.  

       ಇದಲ್ಲದೇ ಸ್ಯಾಟ್ಸ್‌ನಲ್ಲಿ ನೋಂದಣಿಯಾಗಿರುವ ಮೊಬೈಲ್ ನಂಬರ್‌ಗೆ ಫಲಿತಾಂಶ ಬರಲಿದೆ. ಪಿಯು ಫಲಿತಾಂಶದ ಬಗ್ಗೆ ಅಸಮಧಾನವಿದ್ದರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.

     ಹತ್ತನೇ ತರಗತಿಯಲ್ಲಿ ವಿಷಯವಾರು ಪಡೆದಿದ್ದ ಅಂಕಗಳ ಶೇ.45ರಷ್ಟು ಅಂಕ ಗಳಿಕೆ, ಪ್ರಧಮ ಪಿಯುಸಿ ಪರೀಕ್ಷೆಯಲ್ಲಿ ಗಳಿಸರುವ ಅಂಕದಲ್ಲಿ ಶೇ.45ರಷ್ಟು ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.

      ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಶೇ.10ರಷ್ಟು ಅಂಕ ಜತೆಗೆ ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಿಗೆ ಶೇ.5ರಷ್ಟು ಫಲಿತಾಂಶ ನೀಡುತ್ತೇವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

      SSLC+1st PUC+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಅದರಂತೆ, 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ತೇರ್ಗಡೆ ಆಗಿದ್ದಾರೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪುನರಾವರ್ತಿತ ಅಭ್ಯರ್ಥಿಗಳ ಫಲಿತಾಂಶ ಕೂಡ ಪ್ರಕಟಿಸಲಾಗುತ್ತಿದೆ, ಕನಿಷ್ಠ ಉತ್ತೀರ್ಣ ಅಂಕ ನೀಡಿ ಪಾಸು ಮಾಡಲಾಗುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap