ಜುಲೈ 20ರ ಸುಮಾರಿಗೆ ದ್ವಿತೀಯ PUC ಫಲಿತಾಂಶ!!

ಬೆಂಗಳೂರು:

      ಜುಲೈ 20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

      ಈ ಕುರಿತು ಟ್ವಿಟ್ ಮಾಡಿರುವ ಅವರು, ಫಲಿತಾಂಶ ಪ್ರಕಟಣೆ ಬಗ್ಗೆ ಈಗಾಗಲೇ ತಿಳಿಸಿದ್ದೇನೆ. ಈಗ ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ. ಜುಲೈ 20ರ ಸುಮಾರಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಿದರು.

     ಕಳೆದ ಮಾ.4ರಿಂದ 21ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಲಾಕ್‍ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆಯಾಗಿತ್ತು. ಈ ಪರೀಕ್ಷೆಯನ್ನು ಜೂ.18ರಂದು ನಡೆಸಲಾಗಿತ್ತು.

      ಜು.20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಜು.30ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳು ನಡೆಯುತ್ತಿದ್ದು, ಪಿಯು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap