ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ : ಉಚಿತ ಪ್ರಯಾಣ!!

ಬೆಂಗಳೂರು:

      ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮಂಗಳವಾರ (ಜೂ.11)ದಿಂದ ಆರಂಭವಾಗಲಿದ್ದು, 2,29,609 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

     ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ಒಟ್ಟು 2,29,609 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಸಿ.ಜಾಫರ್‌ ತಿಳಿಸಿದ್ದಾರೆ.

ದ್ವಿತೀಯ ಪಿಯು ಪೂರಕ ಪರೀಕ್ಷೆ : ವೇಳಾಪಟ್ಟಿ!!

      ಕಲಾ ವಿಭಾಗ 82,318, ವಾಣಿಜ್ಯ 76,952 ಮತ್ತು ವಿಜ್ಞಾನ ವಿಭಾಗದಲ್ಲಿ 70,339 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಪೂರಕ ಪರೀಕ್ಷೆಗೆ 302 ಪರೀಕ್ಷಾ ಕೇಂದ್ರಗಳು ನಿಗದಿಯಾಗಿವೆ.

      302 ಮುಖ್ಯ ಅಧೀಕ್ಷಕರು ಮತ್ತು 302 ಸಹ ಮುಖ್ಯ ಅಧೀಕ್ಷಕರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಜಿಲ್ಲಾ ಸ್ಕ್ವಾಡ್‌ಗಳು ಕರ್ತವ್ಯ ನಿರ್ವಹಿಸಲಿವೆ.

ಉಚಿತ ಪ್ರಯಾಣ ಸೌಲಭ್ಯ:

      ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ನಿರ್ವಾಹಕರಿಗೆ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣ ಬೆಳೆಸಬಹುದು.ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪರೀಕ್ಷಾ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಸಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap