ಬೆಂಗಳೂರು:
ಶಾಸಕರ ರಾಜೀನಾಮೆ ಬೆನ್ನಲ್ಲೇ ರಾಜ್ಯದ ಸಮ್ಮಿಶ್ರ ಸರ್ಕಾರದ ಫೈನಲ್ ಕೌಂಟ್ ಡೌನ್ ಶುರುವಾಗಿರುವ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಇಂದಿನಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕಮಿಷನರ್ ಅಲೋಕ್ ಕುಮಾರ್ ಅವರು ಇಂದಿನಿಂದ ಜುಲೈ 14 ರ ವರೆಗೆ ಸೆಕ್ಷನ್ 144 ಜಾರಿ ಮಾಡಿದ್ದು, ವಿಧಾನಸೌಧದ ಎಲ್ಲಾ ದ್ವಾರಗಳಲ್ಲೂ ಪೋಲಿಸರನ್ನ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನ ವಿಧಾನಸೌಧ ಸುತ್ತಮುತ್ತ ನಿಯೋಜನೆ ಮಾಡಲಾಗಿದೆ.
ಶಕ್ತಿಸೌಧದಲ್ಲಿ ಇಂದು ಬೆಳಗ್ಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹಲವು ಪೊಲೀಸರು ಮಫ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪೊಲೀಸರು ವಾಹನಗಳನ್ನ ತಪಾಸಣೆ ಮಾಡಿ, ಅನುಮತಿ ಇರುವವರಿಗೆ ಮಾತ್ರ ಪ್ರವೇಶ ನೀಡುತ್ತಿದ್ದಾರೆ. ಹಾಗೇ ರಾಜಭವನದ ಸುತ್ತಲೂ ಖಾಕಿ ಕಣ್ಗಾವಲು ಹಾಕಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ