ಅಧಿವೇಶನ : ವಿಧಾನಸೌಧ ಸುತ್ತ 2 ದಿನ ನಿಷೇದಾಜ್ಞೆ ಜಾರಿ!!

ಬೆಂಗಳೂರು :

      ಜು.29ರಿಂದ ಎರಡು ದಿನಗಳ ಕಾಲ ವಿಧಾನಸಭಾ ಅಧಿವೇಶನ ಹಿನ್ನೆಲೆ ವಿಧಾನಸೌಧ ಕಟ್ಟಡದ ಸುತ್ತಲೂ 2 ಕಿ.ಮೀ ವ್ಯಾಪ್ತಿಯಲ್ಲಿ   ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

     ಈ ಸಂಬಂಧ ನಗರ ಪೊಲೀಸ್ ಆಯುಕ್ತ ಅಲೋಕ್‌ ಕುಮಾರ್ ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲೆಂದು ಐಪಿಸಿ 144ನೆ ಸೆಕ್ಷನ್ ಜಾರಿ ಮಾಡಿದ್ದು, ಎರಡು ದಿನ ನಿಷೇಧಾಜ್ಞೆ ಹಾಕಿದ್ದೇವೆ. ಕಾನೂನು ಭಂಗ ಮಾಡುವವರು ಯಾರೇ ಆಗಿದ್ದರೂ ಬಿಡುವುದಿಲ್ಲ. ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

      ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಿಧಾನ ಸೌಧದ ಒಳಗಡೆ ಮತ್ತು ಹೊರಗಡೆ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ, ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವುದು ನಿಷೇಧವಿದೆ ಎಂದು ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

      ಸೋಮವಾರ(ಜು.29) ಬೆಳಗ್ಗೆ 6ರಿಂದ ಜು.30ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮೆರವಣಿಗೆ, ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಮಾರಕಾಸ್ತ್ರಗಳನ್ನು ಒಯ್ಯುವುದು ನಿಷೇಧಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link