ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ!!

ಬೆಂಗಳೂರು :

      ಕೆಜಿಹಳ್ಳಿ ಮತ್ತು ಡಿಜೆಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಗಸ್ಟ್ 18ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ.

     ಈ ಠಾಣೆಗಳ ವ್ಯಾಪ್ತಿಯಲ್ಲಿ ಗಲಭೆ ನಡೆದ ಆಗಸ್ಟ್ 11ರ ಬೆಳಗ್ಗೆ 6 ಗಂಟೆಯಿಂದ ಇಂದು ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿತ್ತು.  ಪರಿಸ್ಥಿತಿ ಇನ್ನೂ ಬಿಗುವಿನಿಂದ ಕೂಡಿರುವುದರಿಂದ ಆಗಸ್ಟ್ 18ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ.

      ಸೆಕ್ಷನ್ 144 ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link