ತುಮಕೂರು : ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ; ಮತ್ತೆ ಅಧಿಕಾರಕ್ಕೆ ಕೆ.ಎನ್.ಆರ್!

ಬೆಂಗಳೂರು : 

      ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆಗಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದ ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮತ್ತೆ ಅಧ್ಯಕ್ಷರಾಗಿದ್ದಾರೆ.

      ಇತ್ತೀಚೆಗಷ್ಟೇ ಈ ಹಿಂದಿನ ಮೈತ್ರಿ ಸರ್ಕಾರ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿ ಆದೇಶಿಸಿತ್ತು. ಸರ್ಕಾರದ ಈ ವಜಾ ಆದೇಶ ಪ್ರಶ್ನಿಸಿ ರಾಜಣ್ಣ ಕೋರ್ಟ್ ಮೊರೆ ಹೋಗಿದ್ದರು.

ತುಮಕೂರು : ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ : KNR ಬದಲು ಡಿಸಿ ನೇಮಕ!!

      ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಧ್ಯಂತರ ಅರ್ಜಿ ಪುರಸ್ಕರಿಸಿದ ಕೋರ್ಟ್ ಸರ್ಕಾರದ ಸೂಪರ್ ಸೀಡ್ ಆದೇಶಕ್ಕೆ ತಡೆ ನೀಡಿದೆ. ಹಾಗೇ ಕೋರ್ಟ್ ಆದೇಶದ ಮೇರೆಗೆ ರಾಜಣ್ಣ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರದ‌ಲ್ಲಿ ಮುಂದುವರೆದಿದ್ದಾರೆ.

      ಕೆ.ಎನ್.ರಾಜಣ್ಣ ಅಧ್ಯಕ್ಷರಾಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಅನ್ನು ಸರ್ಕಾರ ಸೂಪರ್ ಸೀಡ್ ಮಾಡಿ ಆದೇಶ ಹೊರಡಿಸಿದ್ದರಿಂದ ತುಮಕೂರು ಜಿಲ್ಲಾಧಿಕಾರಿ ಡಾllರಾಕೇಶ್ ಕುಮಾರ್ ಅವರು ಜುಲೈ 20 ರಂದು ಅಧಿಕಾರ ವಹಿಸಿಕೊಂಡಿದ್ದರು.

      ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆದ ಒಂದೇ ವಾರದಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಮತ್ತೆ ಬ್ಯಾಂಕ್ ನಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ