ಬೆಂಗಳೂರು:
ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮ ಸಲಹೆಗಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಮಹದೇವ ಪ್ರಕಾಶ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು.
ಆದರೆ, ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಮಹದೇವ ಪ್ರಕಾಶ್ ಅವರು ಮಾಧ್ಯಮ ಸಲಹೆಗಾರರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ