ಬೆಂಗಳೂರು :
ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಅವರ ಪಾರ್ಥಿವ ಶರೀರದ ಅಂತಿಮ ವಿಧಿ-ವಿಧಾನ ಇಂದು ಸಂಜೆ 4 ಗಂಟೆಗೆ ನಡೆಯಲಿದೆ.
ಪದ್ಮನಾಭ ನಗರದ ತಮ್ಮ ಕಚೇರಿಯಲ್ಲಿ ಇರುವಾಗಲೇ ರವಿ ಬೆಳಗೆರೆ ಅವರಿಗೆ ಹೃದಯಾಘಾತವಾಯ್ತು. ಅಲ್ಲಿನ ಸಿಬ್ಬಂದಿ ಕೂಡಲೆ ಆಸ್ಪತ್ರೆಗೆ ದಾಖಲಿಸಿದರೂ, ಬೆಳಗಿನ ಜಾವ 2.30 ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 9 ಗಂಟೆಯಿಂದ ಪದ್ಮನಾಭನಗರದ ಪ್ರಾರ್ಥನಾ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4 ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಪ್ರಾರ್ಥನಾ ಶಾಲೆ ಆವರಣಲ್ಲಿ ಅಂತಿಮ ಸಂಸ್ಕಾರ ಮಾಡುವ ಇಚ್ಛೆ ಕುಟುಂಬಸ್ಥರಲ್ಲಿ ಇತ್ತು. ಆದರೆ ವಸತಿ ಪ್ರದೇಶವಾದ್ದರಿಂದ ಅಲ್ಲಿ ಅಗ್ನಿಸ್ಪರ್ಶ ಮಾಡಲು ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರಿಂದ ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ