ಬೆಂಗಳೂರು :
ಲೇಖಕ, ಸಂಶೋಧಕ, ವಿದ್ವಾಂಸ, ಬರಹಗಾರ ಡಾ. ಚಿದಾನಂದಮೂರ್ತಿ (88) ಅವರು ಇಂದು ಬೆಳಗ್ಗೆ 4 ಗಂಟೆಗೆ ನಿಧನರಾಗಿದ್ದಾರೆ.
ಇತ್ತೀಚೆಗೆ ನ್ಯುಮೋನಿಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ಸೋಂಕು ನಿಯಂತ್ರಣಕ್ಕೆ ಬಾರದೆ ಶನಿವಾರ ಬೆಳಿಗ್ಗೆ ವಿಧಿವಶರಾದರು. ಅವರು ಮಗ ವಿನಯ್ ಕುಮಾರ್, ಮಗಳು ಶೋಭಾ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಲು ಪ್ರಮುಖ ಕಾರಣರಾಗಿದ್ದ ಚಿದಾನಂದ ಮೂರ್ತಿಯವರು ಇತಿಹಾಸಕಾರರಾಗಿ ಅಪಾರ ಸೇವೆ ಸಲ್ಲಿಸಿದ್ದರು.
ಬೆಂಗಳೂರಿನ ವಿಜಯನಗರ ಸಮೀಪ ಹಂಪಿ ನಗರದ ಮೂರನೇ ಕ್ರಾಸ್ನಲ್ಲಿರುವ ಸ್ವಗೃಹದಲ್ಲಿ ಬೆಳಗ್ಗೆ 9 ಗಂಟೆ ನಂತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಿದಾನಂದಮೂರ್ತಿಯವರ ಆಸೆಯಂತೆ ಅವರ ದೇಹವನ್ನು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು. ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ