ಕನ್ನಡದ ಹಿರಿಯ ಖ್ಯಾತ ಸಾಹಿತಿ, ವಿಮರ್ಶಕ ‘ಜಿ.ಎಸ್.ಆಮೂರ’ ಇನ್ನಿಲ್ಲ!!

ಧಾರವಾಡ :

     ಕನ್ನಡದ ಹಿರಿಯ ಖ್ಯಾತ ಸಾಹಿತಿ ಜಿ.ಎಸ್.ಆಮೂರ ಅವರು ಇಂದು ಮುಂಜಾನೆ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

     ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅತಿ ಅಗ್ರಮಾನ್ಯರಲ್ಲೊಬ್ಬರೆಂದು ಪರಿಗಣಿಸಲ್ಪಟ್ಟಿರುವ ಡಾ.ಅಮೂರ ರವರು ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನ ಸ್ವಗೃಹದಲ್ಲೇ ಅಸ್ತಂಗತರಾದರು ಎಂದು ಇವರ ಮಗ ರವಿ ಆಮೂರ ತಿಳಿಸಿದ್ದಾರೆ.

      ಇವರು ಕರ್ನಾಟಕ ರಾಜ್ಯಸರ್ಕಾರಪ್ರದಾನಮಾಡುವ, ಪಂಪ ಪ್ರಶಸ್ತಿವಿಜೇತರು. ಕನ್ನಡ ಹಾಗೂ ಇಂಗ್ಲೀಷ್ ಸಾಹಿತ್ಯಪ್ರಾಕಾರಗಳಲ್ಲಿ ಪ್ರಕಾಂಡ ಪಂಡಿತರೆಂದು ಪರಿಗಳಿಸಲ್ಪಟ್ಟಿದ್ದರು. ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ 4-5 ದಶಕಗಳಿಂದಲೂ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿದ್ದರು.

    ಖ್ಯಾತ ಸಾಹಿತಿ, ವಿಮರ್ಶಕ ಡಾ: ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ’. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಅಭಿಮಾನಿಗಳು ಮತ್ತು ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap