ಕರ್ನಾಟಕದಲ್ಲಿ ಹಾರಿತು ಪ್ರತ್ಯೇಕ ರಾಜ್ಯ ಧ್ವಜ!!

ಬಾಗಲಕೋಟೆ :

      ಉತ್ತರ ಕರ್ನಾಟಕ ಹೋರಾಟ ಸಮಿತಿಯಿಂದ ಮುಧೋಳ ನಗರದಲ್ಲಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ನೆರವೇರಿಸಲಾಗಿದೆ.

     ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಮುಧೋಳ ನಗರದಲ್ಲಿರುವ ಉತ್ತರ ಕರ್ನಾಟಕ ಹೋರಾಟ ಸಮಿತಿ ಉಪಕಚೇರಿ ಆವರಣದಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ಕರ್ನಾಟಕ ಧ್ವಜವನ್ನು ಬಿಟ್ಟು ಹೊಸ ಧ್ವಜವನ್ನು ರಚಿಸಿ ಧ್ವಜಾರೋಹಣ ನಡೆಸಿದ್ದಾರೆ.

      ಪ್ರತ್ಯೇಕ ಧ್ವಜವು 4 ಬಣ್ಣಗಳಿಂದ ಕೂಡಿದ್ದು, ಮಧ್ಯದಲ್ಲಿ ಉತ್ತರ ಕರ್ನಾಟಕದ ನಕ್ಷೆಯನ್ನು ಒಳಗೊಂಡಿದೆ. ಕೇಸರಿ, ಹಳದಿ, ಹಸಿರು ಬಣ್ಣದ ಮಧ್ಯೆ ನೀಲಿ ವರ್ಣದ ಉತ್ತರ ಕರ್ನಾಟಕ ನಕ್ಷೆಯ ಧ್ವಜವನ್ನು ಅನಾವರಣ ಮಾಡಲಾಗಿದೆ. 

      ಸೆಪ್ಟೆಂಬರ್ 23 2018 ರಂದು ಬಾಗಲಕೋಟೆ ನಗರದಲ್ಲಿ ಹೋರಾಟ ಸಮಿತಿ ಸದಸ್ಯರು ಪಂಚನಿರ್ಣಯ ಕೈಗೊಂಡಿದ್ದರು. ಆಗ ಜನವರಿ 1ರಂದು ಪ್ರತ್ಯೇಕ ಧ್ವಜಾರೋಹಣದ ಮಾಡಬೇಕು ಎಂದು ಹೋರಾಟಗಾರರು ನಿರ್ಧರಿಸಿದ್ದರು. ಇಂದು ಧ್ವಜಾರೋಹಣ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

      ಪ್ರತ್ಯೇಕ ರಾಜ್ಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಸೇರಿದಂತೆ ಇತರೇ ಹೋರಾಟಗಾರರು ಪಾಲ್ಗೊಂಡಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link