ಸರಣಿ ಅಪಘಾತ : ಮೂವರ ದುರ್ಮರಣ!!

ವಿಜಯಪುರ:

      ಎರಡು ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ  ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಬಳಿಯ ಎನ್ ಎಚ್13ನಲ್ಲಿ ನಡೆದಿದೆ.

      ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದೆ, ನಂತರ ಹಿಂಬದಿಯಿಂದ ಬಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗಳ ಮುಖಾಮುಖಿಯಾಗಿದ್ದರಿಂದ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟರೆ, ಕ್ಲೀನರ್ ಲಾರಿ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

       ಅಪಘಾತ ಸಂಭವಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಎರಡೂ ಬದಿಯಲ್ಲಿ ವಾಹನಗಳು ಕಿ.ಮೀಗಟ್ಟಲೇ ಸಾಲುಗಟ್ಟಿ ನಿಂತಿದ್ದವು.

       ಸಂಚಾರಿ ಪೊಲೀಸರು ಸ್ಥಳಕ್ಕಾಮಿಸಿ ಲಾರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. 
ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap