ಅತೃಪ್ತ ಶಾಸಕರ ಮೇಲೆ ‘ವಿಪ್’ ಅಸ್ತ್ರ!

ಬೆಂಗಳೂರು:

      ಅತೃಪ್ತ ಶಾಸಕರ ರಾಜೀನಾಮೆ ಕುರಿತ ನಿರ್ಧಾರ ಇತ್ಯರ್ಥಗೊಳ್ಳದಿರುವ ಮಧ್ಯೆಯೇ ಇಂದಿನಿಂದ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರಿಗೆ ವಿಪ್‌ ಜಾರಿಗೊಳಿಸಲಾಗಿದೆ.

       ಶಾಸಕರು ಶುಕ್ರವಾರದಿಂದ ಈ ತಿಂಗಳ 26ರವರೆಗೆ ನಡೆಯುವ ಪ್ರತಿದಿನದ ಕಲಾಪದಲ್ಲಿ ಕಡ್ಡಾಯವಾಗಿ ಉಪಸ್ಥಿತರಿದ್ದು, ಅಲ್ಲಿ ಮಂಡನೆಯಾಗುವ ವಿತ್ತೀಯ ವಿಧೇಯಕಗಳು, ಶಾಸನಗಳು ಮತ್ತು ಇತರ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸರ್ಕಾರದ ಪರ ಕಡ್ಡಾಯವಾಗಿ ಮತ ಚಲಾಯಿಸುವಂತೆ ವಿಪ್ ನಲ್ಲಿ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

      ಇನ್ನು ಸರ್ಕಾರಕ್ಕೆ ಬಂಡಾಯದ ಬಿಸಿ ಜೋರಾಗಿಯೇ ತಟ್ಟಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಒಟ್ಟು 16 ಶಾಸಕರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ಹೀಗಾಗಿ, ತಾವು ರಾಜೀನಾಮೆ ನೀಡಿದ್ದರೂ, ರಾಜಿನಾಮೆ ಅಂಗೀಕಾರಗೊಳ್ಳದ ಕಾರಣ, ಅತೃಪ್ತ ಶಾಸಕರು ಗೊಂದಲಕ್ಕೆ ಸಿಲುಕಿದ್ದಾರೆ.

      ರಾಜೀನಾಮೆಗಳು ಅಂಗೀಕಾರವಾಗಿಲ್ಲದ ಕಾರಣ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ತಮ್ಮ ರೆಬೆಲ್ ಶಾಸಕರಿಗೆ ವಿಪ್ ಜಾರಿಗೊಳಿಸಿ ಸದನಕ್ಕೆ ಹಾಜರಾಗಿ, ಇಲ್ಲದಿದ್ದರೆ ಅರ್ನಹತೆ ಎದುರಿಸಿ ಎಂದು ಸೂಚಿಸಿವೆ.

      ರಾಜಿನಾಮೆ ನೀಡಿರುವುದರಿಂದ ಅಧಿವೇಶನದ ಕಲಾಪದಿಂದ ದೂರ ಉಳಿಯಬೇಕೊ ಅಥವಾ ವಿಪ್‌ ಉಲ್ಲಂಘನೆಯ ಕ್ರಮಕ್ಕೆ ಹೆದರಿ ಸದನಕ್ಕೆ ಆಗಮಿಸಬೇಕೊ ಎಂಬ ಗೊಂದಲ ಉಂಟಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap