ರಾಯ್‌ಪುರ (ಛತ್ತೀಸ್ ಗಢ):
ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ.
ಇಂದು ಮುಂಜಾನೆ ರಾಯ್‌ಪುರದ ಚೆರಿ ಖೇಡಿ ಎಂಬಲ್ಲಿ ಒಡಿಶಾದ ಗಂಜಾಂನಿಂದ ಗುಜರಾತ್‌ನ ಸೂರತ್‌ಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಪರಿಹಾರ ಘೋಷಣೆ:
ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ ತೊಂದರೆಗೀಡಾದವರ ಕುಟುಂಬಗಳ ನೆರವಿಗೆ ತಕ್ಷಣ ಧಾವಿಸುವಂತೆ ಸಿಎಂ ನವೀನ್ ಪಟ್ನಾಯಕ್ ಸಚಿವ ಸುಶಾಂತ್ ಸಿಂಗ್ ಅವರಿಗೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
