ಬೆಂಗಳೂರು:
ಇಂದು ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಸಚಿವರಾಗಿ ಪಕ್ಷೇತರ ಶಾಸಕರಾದ ಆರ್.ಶಂಕರ್, ನಾಗೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಜೆಡಿಎಸ್ ಕೋಟಾದಿಂದ ಲಭ್ಯವಾಗುವ ಸೀಟಿಗೆ ಪಕ್ಷೇತರ ಶಾಸಕ ನಾಗೇಶ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದ್ದು, ಶಿವಳ್ಳಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಪಕ್ಷೇತರ ಶಾಸಕ ಆರ್ ಶಂಕರ್ ಅವರಿಗೆ ನೀಡಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಸಂಪುಟವನ್ನು ಮೂರನೇ ಬಾರಿಗೆ ವಿಸ್ತರಣೆ ಮಾಡಿದ್ದು, ಇನ್ನೂ ಒಂದು ಸಚಿವ ಸ್ಥಾನ ಬಾಕಿ ಉಳಿಸಿಕೊಂಡಿದ್ದಾರೆ.
ಸಚಿವರ ಪ್ರಮಾಣ ವಚನ ಸಮಾರಂಭ ಮುಗಿದಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗು ಉಪಮುಖ್ಯಮಂತ್ರಿ ಪರಮೇಶ್ವರ್ ನೂತನ ಸಚಿವರಿಗೆ ಶುಭ ಕೋರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ