ಬೆಂಗಳೂರಿಗೆ ಶರಾವತಿ ನೀರು : ನಾಳೆ ಶಿವಮೊಗ್ಗ ಬಂದ್!!!

ಶಿವಮೊಗ್ಗ: 

     ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಹರಿಸುವ ಸರ್ಕಾರದ ನಿರ್ಧಾರ ಖಂಡಿಸಿ ಶರಾವತಿ ಉಳಿಸಿ ಹೋರಾಟ ಒಕ್ಕೂಟ ಜುಲೈ 10ರಂದು ಶಿವಮೊಗ್ಗ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.

     ಶರಾವತಿ ನದಿ ಉಳಿಸಿ ಎಂದು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ದಿನದಿಂದ ಹೋರಾಟ ನಡೆಯುತ್ತಿದೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಬಿಡಲು ಸಾಧ್ಯವಿಲ್ಲ ಎಂದು ಶಿವಮೊಗ್ಗ ಜನತೆ ಒಂದುಗೂಡಿದ್ದು, ವಿವಿಧ ಸಂಘಟನೆಗಳು ಒಟ್ಟಾಗಿ ಜುಲೈ 10 ರ ಬುಧವಾರ ಶಿವಮೊಗ್ಗ ಜಿಲ್ಲಾ ಬಂದ್‌ಗೆ ಕರೆ ನೀಡಿವೆ. 

      ಸಾಹಿತಿ ನಾ. ಡಿಸೋಜಾ ಅಧ್ಯಕ್ಷತೆಯಲ್ಲಿ ಒಕ್ಕೂಟ ರಚನೆಯಾಗಿದ್ದು, ಸಾಹಿತಿಗಳು, ವಿದ್ಯಾರ್ಥಿಗಳು, ವ್ಯಾಪಾರಿಗಳು, ನಾಗರಿಕರು, ವಿವಿಧ ಸಂಘ–ಸಂಸ್ಥೆಗಳು, ಸಂಘಟನೆಗಳ ಮುಖಂಡರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಸೇರಿದಂತೆ ವಿವಿಧ ಪಕ್ಷಗಳ ಸ್ಥಳೀಯ ಘಟಕಗಳು ಬೆಂಬಲ ನೀಡಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

      

Recent Articles

spot_img

Related Stories

Share via
Copy link