ತುಮಕೂರು :
ಸಿದ್ದಗಂಗಾ ಮಠದ ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ಪೀಠದಲ್ಲಿ ಶಿವಲಿಂಗದ ಹಿಂಭಾಗದ ಮೇಲ್ಭಾಗದಲ್ಲಿದ್ದ ಭಾವ ಚಿತ್ರವನ್ನು ತೆರವುಗೊಳಿಸಿ ಅದರ ಜಾಗದಲ್ಲಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.
ಶ್ರೀಗಳ ಬೆಳ್ಳಿ ಪುತ್ಥಳಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಂದು(ಮಂಗಳವಾರ) ಮುಂಜಾನೆಯೇ ಗದ್ದುಗೆ ಪೀಠವನ್ನು ವಿವಿಧ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಪೀಠದ ಕೆಳಭಾಗದಲ್ಲಿ ಶ್ರೀಗಳ ಪಾದುಕೆ, ಸ್ವಲ್ಪ ಮೇಲ್ಭಾಗದಲ್ಲಿ ಶಿವಲಿಂಗ ಈಗಾಗಲೇ ಪ್ರತಿಷ್ಠಾಪನೆ ಮಾಡಲಾಗಿತ್ತು. ಶಿವಲಿಂಗದ ಹಿಂಭಾಗದ ಮೇಲ್ಭಾಗದಲ್ಲಿ ಶ್ರೀಗಳ ಭಾವಚಿತ್ರ ಇರಿಸಲಾಗಿತ್ತು. ಈ ಭಾವ ಚಿತ್ರ ತೆರವುಗೊಳಿಸಿ ಅದರ ಜಾಗದಲ್ಲಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.
ಶ್ರೀ ಶಿವೈಕ್ಯ.ಡಾll ಶಿವಕುಮಾರ ಸ್ವಾಮೀಜಿಯವರ ಪ್ರಥಮ ಸ್ಮರಣೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ದೆಹಲಿ ಮೂಲದ ಉದ್ಯಮಿ ಮುಖೇಶ್ ಗರ್ಗ್ ಅವರು 50 ಕಿಲೋ ತೂಕದ ಬೆಳ್ಳಿಯ ಮೂರ್ತಿಯನ್ನು ಸಮರ್ಪಿಸಿದರು. ಈ ಮೂರ್ತಿ ಸುಮಾರು 3.5 ಅಡಿ ಎತ್ತರದ ಈ ಬೆಳ್ಳಿ ವಿಗ್ರಹವನ್ನು ಲಿಂ.ಶ್ರೀಗಳು ಕುಳಿತ ಭಂಗಿಯಲ್ಲಿ ನಿರ್ಮಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ