ಇಂದು ಸಂಜೆ ಸಚಿವ ಶಿವಳ್ಳಿ ಅಂತ್ಯಕ್ರಿಯೆ!

ಹುಬ್ಬಳ್ಳಿ :

      ಹೃದಯಾಘಾತದಿಂದ ನಿಧನ ಹೊಂದಿರುವ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ನಡೆಯಲಿದೆ.

     ನಿನ್ನೆ ರಾತ್ರಿ ಧಾರವಾಡದ ಕುಂದಗೋಳಕ್ಕೆ ಪಾರ್ಥಿವ ಶರೀರವನ್ನು ರವಾನಿಸಲಾಗಿದ್ದು, ಬಳಿಕ ಶಿವಾನಂದ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಜನರು ಆಗಮಿಸಿ ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

      ಯರಗುಪ್ಪಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಸಿದ್ದರಾಮಯ್ಯ, ಗೃಹ ಸಚಿವ ಎಂ.ಬಿ.ಪಾಟೀಲ್, ಡಿ.ಕೆ. ಶಿವಕುಮಾರ್, ಆರ್.ವಿ.ದೇಶಪಾಂಡೆ ಸೇರಿದಂತೆ ಹಲವು ನಾಯಕರು ಅಂತಿಮ ದರ್ಶನ ಪಡೆಯಲಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap