ಮಂಡ್ಯ :
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೂ ಕಸರತ್ತು ನಡೆಯುತ್ತಿದ್ದು, ಸ್ಪರ್ಧಿಸುವ ಅಭ್ಯರ್ಥಿಗಳಲ್ಲಿಯೂ ಪೈಪೋಟಿ ಏರ್ಪಟ್ಟಿದೆ.
ಹೀಗಿರುವಾಗ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಮೈತ್ರಿ ಪಕ್ಷದಿಂದ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲೇ, ಶಿವರಾಮೇಗೌಡ ಅವರು ಈ ಚುನಾವಣೆಯಲ್ಲೂ ಮೈತ್ರಿ ಪಕ್ಷದ ಅಭ್ಯರ್ಥಿ ನಾನೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ . ಶಿವರಾಮೆಗೌಡ ನೀಡಿರುವ ಈ ಹೇಳಿಕೆಗೆ ಅಂಬರೀಶ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಶಿವರಾಮೆಗೌಡರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ನಿಮಗೆ ಕಳೆದ ಬಾರಿ ಚುನಾವಣೆಯಲ್ಲಿ ಗೆಲ್ಲಲು ಅಂಬರೀಷ್ ಅವರ ಕೃಪಾಶಿರ್ವಾದ ಬೇಕಿತ್ತು. ಈಗ ಅಂಬರೀಷ್ ಕುಟುಂಬದ ಬಗ್ಗೆ ಮಾತನಾಡುತ್ತೀಯಾ ಎಂದು ಶಿವರಾಮೇಗೌಡರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಂಬರಿಶ್ ಗೆ ಕೊಡಬೇಕಾದ ಎಲ್ಲಾ ಸ್ಥಾನಮಾನಗಳನ್ನು ಕೊಟ್ಟಿದ್ದೇವೆ. ಈಗ ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಅಭ್ಯರ್ಥಿ ನಾನೆ ಎಂದು ಹೇಳುತ್ತಿರುವ ಜೆಡಿಎಸ್ ಮುಖಂಡ ಶಿವರಾಮೇಗೌಡ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಅಂಬರೀಶ್ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿದ್ದಾರೆ. ಬಾ ಮುಂದೆ ನಿನಗೆ ಮಾರಿ ಹಬ್ಬ ಇದೆ ಎಂದು ಶಿವರಾಮೇಗೌಡರಿಗೆ ಅಭಿಮಾನಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.