ಬೆಂಗಳೂರು :
ಇಂದಿರಾ ಕ್ಯಾಂಟೀನ್ ಊಟ, ತಿಂಡಿ ದರ ಏರಿಕೆ ಮಾಡಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.
ಇಂದಿರಾ ಕ್ಯಾಂಟೀನ್ ಗೆ ರಾಜ್ಯ ಸರ್ಕಾರವು ಕಳೆದ ಒಂದು ವರ್ಷದಿಂದ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಊಟ, ಉಪಹಾರದ ದರ ಏರಿಕೆಗೆ ಮುಂದಾಗಿದೆ ಎನ್ನಲಾಗಿದ್ದು, ಸದ್ಯ ನೀಡಲಾಗುತ್ತಿರುವ ಊಟ ದರ 10 ರಿಂದ 15 ರೂ.ಗೆ ಉಪಹಾರದ ದರ 5 ರಿಂದ 10 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೊಸ ಗುತ್ತಿಗೆ ಜೊತೆಗೆ ಹೊಸ ದರ ಜಾರಿಗೆ ತರಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಇಂದಿರಾ ಕ್ಯಾಂಟೀನ್ ಗೆ ಸರ್ಕಾರ ಅನುದಾನ ನೀಡದ ಹಿನ್ನೆಲೆಯಲ್ಲಿ ಈಗ ಸರ್ಕಾರದ ಹೊರೆ ಇಳಿಸಲು ಇಂದಿರಾ ಕ್ಯಾಂಟೀನ್ ಊಟ, ಉಪಹಾರದ ದರ ಏರಿಕೆಗೆ ಬಿಬಿಎಂಪಿ ಮುಂದಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಬಡ ಜನರ ಹಸಿವು ನೀಡಿಸಲು ನಾಗರಿಕರಿಗೆ ಕಡಿಮೆ ದರದಲ್ಲಿ ತಿಂಡಿ ಮತ್ತು ಊಟ ವಿತರಿಸುವ ಸಲುವಾಗಿ ರಾಜ್ಯಸರ್ಕಾರ ಈ ಯೋಜನೆಯನ್ನು ಜಾರಿಗೆ ತರಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ